ಕೊಂಕಣದಲ್ಲಿ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ ಪ್ರತಿಸಲದಂತೆ ಈ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗಾಗಿ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆರ್‌ಎಸ್‌ಎಸ್‌ ಹಿರಿಯ ಪ್ರಚಾರಕ ಸು.ರಾಮಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಈ ದೇಶದ ಪ್ರತಿಯೊಂದು ಮಗು ದೇಶಭಕ್ತನಾಗಬೇಕು. ನಾವು ಮಾಡುವ ಕೈಂಕರ್ಯ ಭಾರತ ಮಾತೆಯ ಗೌರವವನ್ನು ಹೆಚ್ಚಿಸಬೇಕು ಎಂದು ಹಲವಾರು ಮಹಾಪುರುಷರ ಉದಾಹರಣೆಯೊಂದಿಗೆ ವಿವರಿಸಿದರು. ಆಶೀರ್ವಾದಕ್ಕೆ ನಮ್ಮ ಸಂಸ್ಕೃತಿಯಲ್ಲಿ ಅಪಾರ ಮಹತ್ವವಿದ್ದು, ಪುರಾಣದಲ್ಲಿ ಕೃಷ್ಣ ದ್ರೌಪದಿಗೆ, ಭೀಷ್ಮ-ದುರ್ಯೋಧನರಿಗೆ, ಗಾಂಧಾರಿ-ಪಾಂಡವರಿಗೆ ಆಶೀರ್ವಾದ ಮಾಡಿದ ಸನ್ನಿವೇಶವನ್ನು ರೋಮಾಂಚನಕಾರಿಯಾಗಿ ಬಣ್ಣಿಸಿದರು. ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಯಾವತ್ತೂ ಶ್ಲಾಘನೆಗೆ ಒಳಗಾಗಿದೆ, ಇದು ಸರ್ವರಿಗೂ ತಿಳಿದ ವಿಚಾರವೇ ಆಗಿದೆ ಎಂದರು. ಕಾರ್ಯಕ್ರಮದ ಅತಿಥಿಯಾಗಿ ಉಪಸ್ಥಿತರಿದ್ದ ಇದೇ ಶಾಲೆಯ ಹಳೆಯ ವಿದ್ಯಾರ್ಥಿನಿ ಡಾ.ಜಯಶ್ರೀ…

Share happily:
Read More

ಕೊಂಕಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

72nd Republic Day Celebration at KET
Share happily:

ಕುಮಟಾ: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಠ್ಠಲ ಆರ್. ನಾಯಕ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಟ್ರಸ್ಟಿಗಳಾದ ರಮೇಶ ಪ್ರಭು ಮಾತನಾಡಿ, ದೇಶ ಕಾಪಾಡುವುದು ಗಡಿಯಲ್ಲಿದ್ದ ಸೈನಿಕರ ಕೆಲಸ ಮಾತ್ರವಲ್ಲದೆ ಈ ದೇಶದ ಪ್ರತಿಯೊಬ್ಬ ನಾಗರೀಕನ ಕರ್ತವ್ಯವೂ ಹೌದು. ಈ ದೇಶದ ಪ್ರತಿ ಪ್ರಜೆಯೂ ಸಂವಿಧಾನವನ್ನು ಅರ್ಥೈಸಿಕೊಂಡು ಅದರ ಪರಿಧಿಯಲ್ಲಿ ತಮ್ಮ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಪ್ರಾಮಾಣಿಕವಾಗಿ ಉಪಯೋಗಿಸಿಕೊಂಡು ಕರ್ತವ್ಯ ಮಾಡಿದರೆ ಮಾತ್ರ ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಸಾಧ್ಯ. ಭಾರತ ಇಂದು ಎಂತಹ ಆಪತ್ತು ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸುವಂತಹ ಮನೋಬಲವನ್ನು ಹೊಂದಿದೆ. ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ನಮ್ಮ ದೇಶವು ಪ್ರಪಂಚದ ಇತರೆ ದೇಶಗಳಿಗೆ ಹೋಲಿಸಿದಾಗ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಇಲ್ಲಿನ ವಿಜ್ಞಾನಿಗಳು ಮತ್ತು…

Share happily:
Read More

ಕೊಂಕಣದಲ್ಲಿ ಸಂಭ್ರಮದ 70ನೇ ಗಣರಾಜ್ಯೋತ್ಸವ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಮೂಹ ಸಂಸ್ಥೆಗಳಿಂದ 70ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಟ್ರಸ್ಟಿನ ಅಧ್ಯಕ್ಷರಾದ ಶ್ರೀ ವಿಠ್ಠಲ ಆರ್. ನಾಯಕರವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ವಿಶ್ವದ ಆಡಳಿತ ವ್ಯವಸ್ಥೆಯಲ್ಲಿಯೇ ಅತ್ಯಂತ ಉತ್ತಮ ವ್ಯವಸ್ಥೆ ಎನಿಸಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಮ್ಮ ದೇಶವು ಅಳವಡಿಸಿಕೊಂಡಿದೆ. ಈ ದೇಶದಲ್ಲಿ ಸಾಮಾನ್ಯ ಪ್ರಜೆಯೂ ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಅರ್ಹನಾಗಿದ್ದಾನೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ, ವಿಶಿಷ್ಟ ಶಾಸ್ತ್ರ-ಸಂಪ್ರದಾಯಗಳನ್ನು ಪಾಲಿಸುವ ಹಾಗೂ ಆಚರಿಸುವ ಬ್ರಹತ್ ರಾಷ್ಟ್ರ ನಮ್ಮದು. ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಸಂರಕ್ಷಕನಾಗಿರಬೇಕು. ದೇಶದ ಭವಿಷ್ಯದ ಕುಡಿಗಳಾಗಿರುವ ವಿದ್ಯಾರ್ಥಿಗಳಾದ ತಾವು ಸಂವಿಧಾನದಲ್ಲಿರಬೇಕಾದ ನಂಬಿಕೆ ಗೌರವವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಪ್ರಗತಿಯಲ್ಲಿ ಅಮೂಲ್ಯವಾದ ಕೊಡುಗೆಯನ್ನು ನೀಡುವುದರ ಮೂಲಕ ಭಾರತವನ್ನು ಪರಮ ವೈಭವ ರಾಷ್ಟ್ರವನ್ನಾಗಿಸುವಲ್ಲಿ ಕಟಿಬದ್ಧರಾಗಬೇಕು ಎಂದರು. ಸಂಸ್ಥೆಯ ವಿಶ್ವಸ್ಥರುಗಳಾದ ರಮೇಶ ಪ್ರಭು, ಡಾ. ವೆಂಕಟೇಶ ಶಾನಭಾಗ, ಗಜಾನನ ಕಿಣಿ, ನಿವೃತ್ತ…

Share happily:
Read More

ರಜತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರ

Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ರಜತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು ಕುಮಟಾದ ಬ್ಲಡ್ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಿಬ್ಬಂದಿಗಳಾದ ಪ್ರಕಾಶ ಗಾವಡಿ, ಹರ್ಷಾ ಶಾಸ್ತ್ರಿ, ಕಾವ್ಯಶ್ರೀ ಪಟಗಾರ, ರಾಮನಾಥ ಶಾನಭಾಗ, ರವಿ ಮುಕ್ರಿ ಈ ಸಂದರ್ಭದಲ್ಲಿ ರಕ್ತದಾನ ಮಾಡುವುದರ ಮೂಲಕ ತಮ್ಮ ಔದಾರ್ಯತೆಯನ್ನು ಮೆರೆದಿದ್ದಾರೆ. ಕುಮಟಾ ಬ್ಲಡ್ ಬ್ಯಾಂಕ್‌ನ ಮುಖ್ಯಸ್ಥರಾದ ಡಾ| ಮಧುಕರ ಕೆ. ನಾಯ್ಕ ಹಾಗೂ ಸಂಗಡಿಗರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ‘ರಕ್ತದಾನ-ಜೀವದಾನ’ ಶೀರ್ಷಿಕೆಯಡಿ ಕೈಗೊಂಡ ಈ ಕಾರ್ಯಕ್ಕೆ ಕೊಂಕಣ ಸಂಸ್ಥೆಯ ಪದಾಧಿಕಾರಿಗಳು, ಶೈಕ್ಷಣಿಕ ಸಲಹೆಗಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Share happily:
Read More

ಕೊಂಕಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಅಂಗಸಂಸ್ಥೆಗಳಿಂದ  72ನೇ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಟ್ರಸ್ಟಿನ ಗೌರವ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ನಮ್ಮ ರಾಷ್ಟ್ರವನ್ನು ಅಗ್ರಮಾನ್ಯ ರಾಷ್ಟ್ರವಾಗಿ ಪರಿವರ್ತಿಸಲು ಎಲ್ಲರೂ ಪಣತೊಡಬೇಕು. ನಿರಂತರವಾಗಿ ದೇಶದ ಗಡಿಯಲ್ಲಿ ಪಹರೆ ಕಾಯುವ ನಮ್ಮ ಯೋಧರನ್ನು ಗೌರವಿಸಿ. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವರ ಕಾಣಿಕೆ ಅಪಾರ. ಅದೇ ರೀತಿ ಗಳಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆ ಹಾಗೂ ಕರ್ತವ್ಯವಾಗಿದೆ, ಆ ನಿಟ್ಟಿನಲ್ಲಿ ಸರ್ವರೂ ದೇಶಪ್ರೇಮ ಬೆಳೆಸಿಕೊಳ್ಳಿ ಎಂದು ಕರೆ ನೀಡುತ್ತಾ, ಸಂಸ್ಥೆಯ ಬೆಳ್ಳಿ ಹಬ್ಬದ ಈ ಸುಸಂದರ್ಭದಲ್ಲಿ ನಮ್ಮ ಸಂಸ್ಥೆಯಲ್ಲಿ ವ್ಯಾಸಂಗಮಾಡುತ್ತಿರುವ ವೀರಯೋಧರ ಮಕ್ಕಳಿಗೆ ಕಲಿಕಾ ಶುಲ್ಕದಲ್ಲಿ ಸಂಸ್ಥೆಯ ವತಿಯಿಂದ ವಿಶೇಷ ರಿಯಾಯಿತಿಯನ್ನು ನೀಡುವುದಾಗಿ ಘೋಷಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಅಭಿಮಾನದ ದ್ಯೋತಕವಾಗಿ ನಡೆಸಿದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ದೇಶಕ್ಕಾಗಿ…

Share happily:
Read More

ಕೊಂಕಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆ, ಬಿ.ಕೆ.ಭಂಡಾರ್ಕರ್ ರವರ ಸರಸ್ವತಿ ಪ.ಪೂ ಕಾಲೇಜಿನ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸರಸ್ವತಿ ಮಾಳಪ್ಪ ಕಾಮತ ಕೃಷಿ-ವೃತ್ತಿ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಪೂರ್ಣಿಮಾ ಪೈ, ಹಿರಿಯ ಸಿವಿಲ್ ನ್ಯಾಯಾಧೀಶರು, ಕುಮಟಾ ಇವರು “ಧನಾತ್ಮಕ ಚಿಂತನೆಯೊಂದಿಗೆ ಸತತ ಪ್ರಯತ್ನ ನಡೆಸಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳು ಕೇವಲ ಎಂಜಿನಿಯರಿಂಗ್, ಮೆಡಿಕಲ್ ವೃತ್ತಿಗಳಷ್ಟಕ್ಕೆ ಮಾತ್ರ ಅಂಟಿಕೊಳ್ಳದೇ, ಕಾನೂನು ಇನ್ನಿತರ ವೃತ್ತಿಗಳಲ್ಲಿಯೂ ತೊಡಗಿಸಿಕೊಳ್ಳುವುದರ ಮೂಲಕ ಸಮಾಜ ಸೇವೆ ಮಾಡಬೇಕು” ಎಂದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಪಿ.ಕೆ.ಪ್ರಕಾಶ, ನಿವೃತ್ತ ಡಿ.ಡಿ.ಪಿ.ಐ, ಕಾರವಾರ ಇವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೌಲ್ಯಗಳು ಮತ್ತು ಸಂಸ್ಕೃತಿ ಅವರ ಉಜ್ವಲ…

Share happily:
Read More