ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಶಿಕ್ಷಣ ಸಂಸ್ಥೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ವಿಶ್ವ ಸಾರಸ್ವತ ಫೆಡರೇಶನ್ ಅಧ್ಯಕ್ಷ ಹಾಗೂ ಹಾಂಗ್ಯೊ ಐಸ್ಕ್ರೀಂ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ ಪೈ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಮುರಳೀಧರ ಪ್ರಭು, 97 ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಇಂದು ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಲಿಯುವ ಆಸಕ್ತಿ ಇರುವ ಸರಿ ಸುಮಾರು 50 ಬಡ ಪ್ರತಿಭಾವಂತ ಮಕ್ಕಳಿಗೆ ಬಹುತೇಕ ಎಲ್ಲವೂ ಉಚಿತ ಮಾಡಿದ್ದೇವೆ. ದಿನಕರ ದೇಸಾಯಿಯವರ ಆದರ್ಶವನ್ನು ಮುಂದಿಟ್ಟು ಶಿಕ್ಷಣ ದಾನಿಗಳಿಂದಲೇ ನಡೆಸಿಕೊಂಡು ಹೋಗುತ್ತಿರುವ ಸಂಸ್ಥೆ ಇದಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಟಾಪ್ 10 ರ್ಯಾಂಕ್ನಲ್ಲಿ ಪ್ರತಿ ವರ್ಷ ನಮ್ಮ ಶಾಲೆಯ ಐದರಿಂದ ಆರು ವಿದ್ಯಾರ್ಥಿಗಳಾದರೂ ಇದ್ದೇ ಇರುತ್ತಾರೆ ಎಂಬುದು ನಮಗೆ ಹೆಮ್ಮೆ. ಈ ಸಂಸ್ಥೆ ಗೆ ಪ್ರದೀಪ…
Read MoreCategory: SPUC
ಕೊಂಕಣದಲ್ಲಿ ಗಣರಾಜ್ಯೋತ್ಸವ ಆಚರಣೆ
ಕುಮಟಾ: 73ನೆಯ ಗಣರಾಜ್ಯೋತ್ಸವದ ಅಂಗವಾಗಿ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಮುರಳೀಧರ ಪ್ರಭುರವರು ಧ್ವಜಾರೋಹಣಗೈದು ಮಾತನಾಡುತ್ತ, ಪ್ರಜಾಪ್ರಭುತ್ವ ನಮ್ಮ ಪಾಲಿಗೆ ವರದಾನವಾದರೂ ಇಂದು ಅದರ ಪ್ರಜಾಪ್ರಭುತ್ವದ ಅಗತ್ಯವಿದೆಯೇ ಎಂದು ವಿಮರ್ಶಿಸುವ ಪರಿಸ್ಥಿತಿ ಉಂಟಾದದ್ದು ವಿಪರ್ಯಾಸವೇ ಸರಿ. ಭಾರತ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ರವರ ಅಧ್ಯಕ್ಷತೆಯಲ್ಲಿ ರೂಪಿತವಾದ ಈ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನು ಓದಿ, ಅರ್ಥೈಸಿಕೊಂಡು, ಅದರ ಆಶಯಗಳನ್ನು ಅಳವಡಿಸಿಕೊಂಡು ಬದುಕಬೇಕಾದ ಅಗತ್ಯತೆ ಇದೆ ಎಂದರು. ಸಂವಿಧಾನವನ್ನು ಗೌರವಿಸುವ, ದೇಶದ ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತವನ್ನು ವಿಶ್ವಗುರುವಾಗಿ ಮಾಡಬೇಕಾದ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾರ್ಮಿಕವಾಗಿ ನುಡಿದರು. ಸಂಸ್ಥೆಯ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ, ಟ್ರಸ್ಟಿಗಳಾದ ಅನಂತ ಶಾನಭಾಗ, ವಿಶ್ರಾಂತ ಮುಖ್ಯಾಧ್ಯಾಪಕರಾದ ಎಂ.ಎಂ.ಹೆಗಡೆ, ವಿಧಾತ್ರಿಯ ಗುರುರಾಜ ಶೆಟ್ಟಿ, ಅಂಗಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಈ…
Read Moreಕೊಂಕಣದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ
ಕುಮಟಾ 22-11-2021: ರಾಷ್ಟ್ರೀಯ ಶಿಕ್ಷಣ ನೀತಿ 2020 ರ ವಿಶ್ಲೇಷಣೆ ಮತ್ತು ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಏರ್ಪಡಿಸಲಾಗಿತ್ತು. ಶ್ರೀ ಎಸ್.ಆರ್.ಮನಹಳ್ಳಿ ವಿಶ್ರಾಂತ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬಾಗಲಕೋಟ ಅವರು ಕಾರ್ಯಗಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಷ್ಟೀಯ ಶಿಕ್ಷಣ ನೀತಿ ಇದರ ಅನುಷ್ಠಾನದ ಕುರಿತು ನಿಖರ ಮಾಹಿತಿಗಳನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಭಾರತದಲ್ಲಿ ಮಕ್ಕಳೇ ದೇಶದ ಆಸ್ತಿ ಎಂದು ತಿಳಿದಿರುವಾಗ ಈ ಶಿಕ್ಷಣ ಭಾರತದಲ್ಲಿ ಮುಂದೊಂದು ದಿನ ಹೊಸ ಕ್ರಾಂತಿಯನ್ನುಂಟುಮಾಡಿ ಭಾರತ ವಿಶ್ವಗುರು ಆಗಲು ಸಾಧ್ಯ, ಸ್ವಾವಲಂಬಿತ ಭಾರತ ಆಗಲು ಸಾಧ್ಯ ಎಂದು ಹಲವು ಉದಾಹರಣೆಗಳ ಮೂಲಕ ವಿಶ್ಲೇಷಿದರು. ವಿದ್ಯಾರ್ಥಿಗಳು ಯಾವ ಒತ್ತಡಕ್ಕೆ ಒಳಗಾಗದೇ ನಲಿಕಲಿವ ಹಾಗೂ ಸೃಜನಶೀಲ ವ್ಯಕ್ತಿತ್ವ ನಿರ್ಮಾಣದ ಗುಣಮಟ್ಟದ ಶಿಕ್ಷಣ ಇದಾಗಿದೆ ಎಂದರು. ರಾಷ್ಟ್ರೀಯ ಶಿಕ್ಷಣದ ಎಂಟು ಹಂತಗಳನ್ನು ವಿವರಿಸಿದರು. ಟ್ರಸ್ಟಿನ…
Read More2019-20ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸರಸ್ವತಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಅಮೋಘ ಸಾಧನೆ
ಕುಮಟಾದ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಮಾರ್ಚ್ 2020 ರ ಫಲಿತಾಂಶ ಪ್ರಕಟಗೊಂಡಿದ್ದು ಕಾಲೇಜಿನ ಸರಾಸರಿ ಫಲಿತಾಂಶ 97ಶೇಕಡಾಗಿದ್ದು ಒಟ್ಟು 99 ವಿದ್ಯಾರ್ಥಿಗಳಲ್ಲಿ 96 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 96 ಶೇಕಡಾ ಫಲಿತಾಂಶ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಂಕಗಳಿಸಿ ಕ್ರಮವಾಗಿ ಎಚ್.ಎಸ್. ವಿಶಾಲ 97.5% (ಲೆಕ್ಕಶಾಸ್ತ್ರ 100, ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), ಕುಶಿ ಭಟ್ 97.5% (ಲೆಕ್ಕಶಾಸ್ತ್ರ 100, ಸಂಖ್ಯಾಶಾಸ್ತ್ರದಲ್ಲಿ 100), ವೈಷ್ಣವಿ ಮೇಸ್ತ 97.5% (ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), 600ಕ್ಕೆ 585 ಅಂಕ ಗಳಿಸಿ ಪ್ರಥಮ ಸ್ಥಾನವನ್ನು, ಗೌತಮಿ ಪೈ 97.33% (ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), 600ಕ್ಕೆ 584 ದ್ವಿತೀಯ ಹಾಗೂ ಕೃತಿಕ ನಾಯಕ 95.33% (ವ್ಯವಹಾರ ಅಧ್ಯಯನದಲ್ಲಿ 100) 572 ಅಂಕ ಗಳಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 6…
Read Moreಸರಸ್ವತಿ ಪದವಿ ಪೂರ್ವ ಕಾಲೇಜಿನ ಉತ್ತಮ ಸಾಧನೆ : ವಾಣಿಜ್ಯ ವಿಭಾಗದಲ್ಲಿ 100%, ವಿಜ್ಞಾನ ವಿಭಾಗದಲ್ಲಿ 90% ಫಲಿತಾಂಶ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಮಾರ್ಚ್ 2019 ರ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 100 ಶೇಕಡಾ ಫಲಿತಾಂಶ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕುಮಾರಿ ಮಾನಸ ಪಂಡಿತ ಶೇ 96.66, ಕುಮಾರಿ ಯೋಗಿತಾ ತಾಂಡೇಲ ಶೇ 94.17, ಕುಮಾರ ದೀಪಕ ಕಿಣಿ ಶೇ 93.16, ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟು 12 ವಿದ್ಯಾರ್ಥಿಗಳಲ್ಲಿ 06 ವಿದ್ಯಾರ್ಥಿಗಳು 85ಕ್ಕಿಂತ ಅಧಿಕ ಅಂಕಗಳಿಸಿದರೆ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಪಾಸಾಗಿರುತ್ತಾರೆ. ಅಲ್ಲದೇ ವ್ಯವಹಾರ ಅಧ್ಯಯನದಲ್ಲಿ ಇಬ್ಬರು ಮತ್ತು ಲೆಕ್ಕಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 90% ಫಲಿತಾಂಶ ದಾಖಲಾಗಿಸಿ ಕುಮಾರಿ ವಿ. ಅನ್ವಿತ ಶೇ 92.16, ಕುಮಾರಿ ವೈಷ್ಣವಿ ನಾಯಕ ಶೇ. 91.66,…
Read Moreಕೊಂಕಣದ ಸರಸ್ವತಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಬಿ.ಕೆ.ಭಂಡಾರಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ಇನ್ಫೋಸಿಸ್ ಬ್ಲಾಕ್ ಲೋಕಾರ್ಪಣೆ ಕಾರ್ಯಕ್ರಮವನ್ನು ಗೋಕರ್ಣ ಪರ್ತಗಾಳಿ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಹಾಗೂ ಪಟ್ಟಶಿಷ್ಯ ಶ್ರೀ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿ ಇವರು ದೀಪ ಬೆಳಗಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಮಟಾದ ಶಾಸಕರಾದ ದಿನಕರ ಶೆಟ್ಟಿಯವರು ಮಾತನಾಡುತ್ತ ಶಿಕ್ಷಣದೊಂದಿಗೆ ಸಂಸ್ಕಾರ ನೀಡುತ್ತಾ ಜಿಲ್ಲೆಯಲ್ಲಿಯೇ ಅಗ್ರಸ್ಥಾನ ಪಡೆದು ಕೊಂಡಿರುವುದು ಕುಮಟಾದ ಹೆಮ್ಮೆಯ ಕೊಂಕಣ ಎಜ್ಯುಕೇಆನ ಟ್ರಸ್ಟನ ಸಮೂಹ ಸಂಸ್ಥೆಗಳು ಎಂದು ನುಡಿದರು. ಅದೇ ರೀತಿ ಇನ್ನೋರ್ವ ಅತಿಥಿಗಳಾದ ಹಾಂಗ್ಯೊ ಐಸ್ಕ್ರೀಂನ ಮ್ಯಾನೇಂಜಿಗ್ ಡೈರೆಕ್ಷರ್ ಪ್ರದೀಪ ಪೈ ಶುಭ ಹಾರೈಸಿದರು. ನಂತರ ಆರ್ಶೀರ್ವಚನವಿತ್ತ ಸ್ವಾಮೀಜಿಯವರು ಶುಭಮೂಹೂರ್ತದಲ್ಲಿ ಈ ವಿದ್ಯಾಲಯವನ್ನು ಲೋಕಾರ್ಪಣೆ ಮಾಡಿದ್ದೇವೆ, ವಿದ್ಯಾರ್ಥಿಗಳು ವಿದ್ಯೆ, ವಿನಯ, ವಿವೇಕ, ವಿವೇಚನೆ ಬೆಳೆಸಿಕೊಂಡು ಸಂಸ್ಕಾರ ಪಡೆದುಕೊಳ್ಳಬೇಕು.…
Read Moreಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮಕ್ಕೆ ನಾಂದಿ ಹಾಡಿದ ಕೊಂಕಣದ ‘ಪರಂಪರಾ ಕೂಟ’
ಕುಮಟಾ: ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಕುಮಟಾದ ಪ್ರಸಿದ್ಧ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ, ರೌಪ್ಯ ಮಹೋತ್ಸವದ ಈ ಸುಸಂದರ್ಭದಲ್ಲಿ, ‘ಹಳೆ ಬೇರು-ಹೊಸ ಚಿಗುರು’ ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ಪರಿಸರದಲ್ಲಿ ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮ ಕಾರ್ಯಕ್ರಮ ಅಭೂತಪೂರ್ವವಾಗಿ ಜರುಗಿ ಯಶಸ್ವಿಯಾಯಿತು. ‘ದೀಪಾವಳಿ ಮೇಳ’ದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ, ಶಿಕ್ಷಣ ಪ್ರೇಮಿ ಹಾಗೂ ಗುರುಪ್ರಸಾದ ಪ್ರೌಢಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜಯಂತ ನಾಯ್ಕ ಉದ್ಘಾಟಿಸಿದರು. ಸಂಸ್ಥೆಯ ಕುರಿತಾಗಿ ಹೆಮ್ಮೆಯ ಮಾತಗಳನ್ನಾಡಿದ ಅವರು, ತಮ್ಮ ಮೊಮ್ಮಕ್ಕಳು ಇದೇ ಸಂಸ್ಥೆಯಲ್ಲಿ ಕಲಿಯುತ್ತಿದ್ದು ಅವರಲ್ಲಿ ಸಂಸ್ಕೃತಿ ಮೂಡುವಲ್ಲಿ ಶಿಕ್ಷಕರು ಹಾಗೂ ಸಂಸ್ಥೆಯವರ ಕಾರ್ಯ, ಕಾಳಜಿ ಶ್ಲಾಘನೀಯ ಎಂದು ನಿದರ್ಶನ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಜತ…
Read Moreಉತ್ತರ ಕನ್ನಡ ಜಿಲ್ಲೆಗೆ ಉತ್ತಮ ಫಲಿತಾಂಶ ದಾಖಲಿಸಿದ ಸರಸ್ವತಿ ಪಿ.ಯು. ಕಾಲೇಜ್
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ 99% ಫಲಿತಾಂಶ ದಾಖಲಾಗಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಪರೀಕ್ಷೆ ಎದುರಿಸಿದ 76 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಅಂಕ ಗಳಿಸಿದರೆ, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಕುಮಾರ ಮುಕುಂದ ನಾಯಕ 97.66% ಅಂಕ ಗಳಿಸಿ ನೂತನ ದಾಖಲೆ ನಿರ್ಮಿಸುವದರ ಜೊತೆ ನಿರಂಜನ ಭಂಡಾರಕರ್ 97.5%, ಭೂಮಿಕಾ ಭಟ್ಟ 96.66% ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಅದಲ್ಲದೇ, ರಸಾಯನ ಶಾಸ್ತ್ರದಲ್ಲಿ ಇಬ್ಬರು, ಗಣಕ ವಿಜ್ಞಾನದಲ್ಲಿ ನಾಲ್ಕು, ಗಣಿತದಲ್ಲಿ ಇಬ್ಬರು ಹಾಗೂ ಭೌತಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇದು ಕಾಲೇಜಿನ ಉತ್ತಮ ಫಲಿತಾಂಶವಾಗಿದ್ದು, ವಿದ್ಯಾರ್ಥಿಗಳ ಈ…
Read More100% ಫಲಿತಾಂಶ ದಾಖಲಿಸಿದ ಸರಸ್ವತಿ ಪದವಿ ಪೂರ್ವ ಕಾಲೇಜು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 100 ಫಲಿತಾಂಶ ದಾಖಲಾಗಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಕುಮಾರಿ ದೀಕ್ಷಾ ಭಟ್ ಶೇ 95.33, ಕುಮಾರಿ ಸನ್ನಿಧಿ ಪ್ರಭು ಶೇ 92.83, ಕುಮಾರಿ ಪಾರ್ವತಿ ಮಾರ್ಕಾಂಡೆ ಶೇ 92.16 ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟು 21 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಶೇಕಡಾ 85ಕ್ಕಿಂತ ಅಧಿಕ ಅಂಕಗಳಿಸಿದರೆ ಉಳಿದೆಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣ ಯಲ್ಲಿ ಪಾಸಾಗಿರುತ್ತಾರೆ. ಅಲ್ಲದೇ ಲೆಕ್ಕಶಾಸ್ತ್ರದಲ್ಲಿ ಮೂವರು ಮತ್ತು ವಾಣಿಜ್ಯ ಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು, ಮಾನ್ಯ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಉತ್ತರಕನ್ನಡ…
Read Moreದಿವಂಗತ ಶ್ರೀ ಪಿ.ಎಸ್.ಕಾಮತ ಸ್ಮರಣಾರ್ಥ ತಾಲೂಕಾ ಮಟ್ಟದ ಚರ್ಚಾ ಸ್ಪರ್ಧೆ
“ಕಪ್ಪು ಹಣದ ನಿಯಂತ್ರಣಕ್ಕೆ ನೋಟು ರದ್ದತಿ ಸಹಾಯಕವಾಗಿದೆ” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕಾ ಮಟ್ಟದ ಪದವಿ ಪೂರ್ವ, ಪದವಿ, ಡಿ.ಎಡ್., ಬಿ.ಎಡ್. ಹಾಗೂ ಪಾಲಿಟೆಕ್ನಿಕ್ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ನಾಡು-ನುಡಿಯ ಏಳಿಗೆಗೆ ಶ್ರಮಿಸಿದ ಹಿರಿಯ ಚೇತನ ದಿವಂಗತ ಶ್ರೀ ಪಿ.ಎಸ್.ಕಾಮತ ಸ್ಮರಣಾರ್ಥ ತಾಲೂಕಾ ಮಟ್ಟದ ಚರ್ಚಾ ಸ್ಪರ್ಧೆಯನ್ನು ಸರಸ್ವತಿ ಪದವಿ ಪೂರ್ವ ಕಾಲೇಜು ಕುಮಟಾದಲ್ಲಿ ನೇರವೇರಿಸಲಾಯಿತು. ಸಂಘಟಕರಾದ ಶ್ರೀ ಅಶೋಕ ಭಟ್ಟ ಶಿಕ್ಷಕರು, ಕತಗಾಲ ಇವರ ಮಾರ್ಗದರ್ಶನದಲ್ಲಿ ನಡೆದ ಈ ಸ್ಪರ್ಧೆಗೆ ತೀರ್ಪುಗಾರರಾಗಿ ಹಿರಿಯ ಸಾಹಿತಿಗಳು, ಚಿಂತಕರಾದ ಶ್ರೀ ಪುಟ್ಟು ಕುಲಕರ್ಣಿ, ಶ್ರೀ ಜಿ.ಎಸ್. ಭಟ್ಟ ನಿವೃತ್ತ ಪ್ರಾಂಶುಪಾಲರು ಏ.ವಿ.ಬಾಳಿಗ ವಾಣಿಜ್ಯ ಮಹಾವಿದ್ಯಾಲಯ, ಕುಮಟಾ ಮತ್ತು ಶ್ರೀಮತಿ ಸುಧಾ ಬಿ. ಗೌಡ ವಕೀಲರು ಮತ್ತು ಸಮಾಜ ಸೇವಾಕರ್ತರು ಮಚಗೋಣ, ಕುಮಟಾ ಇವರು ಆಗಮಿಸಿದ್ದರು. ಚರ್ಚಾ ಸ್ಪರ್ಧೆಯಲ್ಲಿ…
Read More