ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳ ಸಾಧನೆ

Taluka Level Pratibha Karanji 2019
Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ನೆಲ್ಲಿಕೇರಿಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಮೋಘ ಸಾಧನೆಗೈದಿದ್ದಾರೆ. ನಮಿತಾ ವಿ. ಭಟ್ಟ ಕೊಂಕಣಿ ಭಾಷಣ, ದ್ರವ್ಯಾ ಹೆಗಡೆ ಮರಾಠಿ ಭಾಷಣ, ಕಾರ್ತಿಕ ನಾಯಕ ಆಶು ಭಾಷಣ, ಶಿಲ್ಪಾ ಭಟ್ಟ ಭಾವಗೀತೆ, ಅಭೇದಾ ಭಟ್ಟ ಜನಪದಗೀತೆ, ಹಾಗೂ ಖುಷಿ ಭಂಡಾರಿ ರಂಗೋಲಿ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿ, ಪ್ರಥ್ವಿ ಹೆಗಡೆ ಸಂಸ್ಕೃತ ಭಾಷಣ, ಕಾರ್ತಿಕ ಶುಕ್ಲ ಸಂಸ್ಕೃತ ಧಾರ್ಮಿಕ ಪಠಣ, ಹಾಗೂ ಪ್ರತೀಕ್ಷಾ ನಾಯಕ ಗಝಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ, ಚಂದನ ಹೆಗಡೆ ಸಿದ್ಧ ಭಾಷಣ, ಹಾಗೂ ಅಕ್ಷತಾ ಭಟ್ಟ ಭರತನಾಟ್ಯದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳ ಈ ಎಲ್ಲಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ,…

Share happily:
Read More

ಕೊಂಕಣದ ಅಂಗಳದಲ್ಲಿ ಸಾಫ್ಟ್ ಲ್ಯಾಂಡ್ ಮಾಡಿದ ಇಸ್ರೋ

Share happily:

ಕುಮಟಾ: ಯು.ಎಸ್.ಎಸ್.ಆರ್. ಅರ್ಸ್ಟೈಲ್‌ನಿಂದ ಅಕ್ಟೋಬರ್ ೦೪, ೧೯೫೭ ರಂದು ಉಡಾಯಿಸಲ್ಪಟ್ಟ “ಸ್ಪುಟ್ನಿಕ್”ನ ಸ್ಮರಣಾರ್ಥ ಬಾಹ್ಯಾಕಾಶ ಸಂಶೋಧನೆಯಲ್ಲಿ ತೊಡಗಿರುವ ವಿಶ್ವದ ಎಲ್ಲಾ ರಾಷ್ಟ್ರಗಳು ಅಕ್ಟೋಬರ್ ೪ ರಿಂದ ೧೦ರವರೆಗೆ ‘ವಿಶ್ವ ಬಾಹ್ಯಾಕಾಶ ಸಪ್ತಾಹ’ವನ್ನು ಆಚರಿಸುತ್ತಿವೆ. ಇದರ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇವರು ಕರ್ನಾಟಕದ ಕೆಲವೇ ಕೆಲವು ಆಯ್ದ ಪ್ರೌಢಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನಜೀವನವನ್ನು, ಸಮಾಜವನ್ನು ಉನ್ನತೀಕರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಇಸ್ರೋದ ವಿಜ್ಞಾನಿ ಎಚ್.ಎನ್.ಸುರೇಶಕುಮಾರ ಅಭಿಪ್ರಾಯಪಟ್ಟರು. ದಿ. ೦೫-೧೦-೨೦೧೯ ಶನಿವಾರ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಗ್ರಹ ಉಡಾವಣೆ ಹಾಗೂ ಅದರ ಮಹತ್ವ ಮತ್ತು ಲಾಭಗಳ ಕುರಿತು ಜನ ಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವುದು ನಮ್ಮ ಘನ ಉದ್ದೇಶವಾಗಿದ್ದು ಅದಕ್ಕಾಗಿ ಈ ಸಪ್ತಾಹವನ್ನು ಇಸ್ರೋ ಹಮ್ಮಿಕೊಂಡಿದೆ ಎಂದು ಅದಕ್ಕೆ ಸಂಬಂಧಿಸಿದ ಪಿಪಿಟಿ…

Share happily:
Read More

ಕೊಂಕಣದಲ್ಲಿ ‘ವಿನಯಸ್ಮೃತಿ’ ಹಾಗೂ ‘ಕೊಂಕಣಿ ಮಾನ್ಯತಾ ದಿವಸ್’

‘ವಿನಯಸ್ಮೃತಿ’ ಹಾಗೂ ‘ಕೊಂಕಣಿ ಮಾನ್ಯತಾ ದಿವಸ್’
Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನಲ್ಲಿ ಹಮ್ಮಿಕೊಂಡ ವಿನಯಸ್ಮೃತಿ ಹಾಗೂ ಕೊಂಕಣಿ ಮಾನ್ಯತಾ ದಿವಸ್ ಕಾರ್ಯಕ್ರಮವನ್ನು ನಿವೃತ್ತ ಸಂಪನ್ಮೂಲ ಶಿಕ್ಷಕರು, ಶಿಕ್ಷಣಪ್ರೇಮಿಗಳು ಆಗಿರುವ ಶ್ರೀ ಹೆಚ್. ಎನ್. ಪೈ ಹಳದಿಪುರ ಇವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಿ.ವಿನಯಾ ಶಾನಭಾಗರವರ ಸ್ತುತ್ಯಾರ್ಹ ಕಾರ್ಯಗಳನ್ನು ಶ್ಲಾಘಿಸಿ, ಶಿಕ್ಷಕರಿಗೆ ಅವರು ಮಾರ್ಗದರ್ಶಿಯಾಗಿದ್ದರು. ಶಿಕ್ಷಕನಾದವನು ದಿನದಿನವೂ ಹೊಸ ಹೊಸ ವಿಚಾರಗಳನ್ನು, ಪ್ರೇರಣೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ಆತ ಯಾವತ್ತೂ ಜೀವಂತವಾಗಿರುತ್ತಾನೆ ಎಂದು ದಿ. ವಿನಯಾ ಶಾನಭಾಗ ಅವರನ್ನು ಉದಾಹರಿಸಿದರು. ಅದೇ ರೀತಿ, ಕೊಂಕಣಿ ಭಾಷೆಯನ್ನು ಎಲ್ಲರೂ ಪ್ರೀತಿಸಿ ಬೆಳೆಸಬೇಕೆಂದು ಕರೆನೀಡಿ ಭಾಷಾ ಇತಿಹಾಸವನ್ನು ವಿವರಿಸಿದರು. ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ದಿ. ವಿನಯಾ ಶಾನಭಾಗ ಅವರ ಹೆಸರಲ್ಲಿ ಪ್ರತಿ ವರ್ಷ ಕೊಡಲ್ಪಡುವ ವಿನಯಸ್ಮೃತಿ ಸಮರ್ಥ ಶಿಕ್ಷಕ ಪುರಸ್ಕಾರವನ್ನು ಉಪ್ಪಿನ ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶ್ಯಾಮಲಾ ಹೆಗಡೆ ಇವರ ಹಿಂದುಳಿದ…

Share happily:
Read More

ರಾಜ್ಯಕ್ಕೆ ಕುಮಟಾದ ‘ಕೊಂಕಣ’ವೇ ಫರ್ಸ್ಟ್ & ಬೆಸ್ಟ್ (ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕೊಂಕಣದ ವಿದ್ಯಾರ್ಥಿಗಳದ್ದೇ ದರ್ಬಾರ್)

Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರತಿಸಲದಂತೆ ಈ ವರ್ಷವೂ ಶೇ.100ರಷ್ಟಾಗಿದ್ದು, ರಾಜ್ಯಮಟ್ಟಕ್ಕೆ ಪ್ರಥಮ ರ‍್ಯಾಂಕ್ ಪಡೆಯುವುದರ ಮೂಲಕ ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶ ದಾಖಲಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಲೆಯ 7 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟಾಪ್ 10 ರ‍್ಯಾಂಕಿಂಗ್ ಪಟ್ಟಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿನಿ ನಾಗಾಂಜಲಿ ಪರಮೇಶ್ವರ ನಾಯ್ಕ ಪೂರ್ಣಾಂಕ (625 ಕ್ಕೆ 625) ಗಳಿಕೆಯ ವಿಶಿಷ್ಟ ಹಾಗೂ ಅಪರೂಪದ ಚಿನ್ನದ ಸಾಧನೆಗೈದು ಸಂಸ್ಥೆಯ ಘನತೆಯನ್ನು ಉತ್ತುಂಗಕ್ಕೇರಿಸಿದ್ದು ಮಾತ್ರವಲ್ಲದೆ ಇಡೀ ರಾಜ್ಯವೇ ಉತ್ತರ ಕನ್ನಡದ ಕುಮಟಾದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ. ಇವಳಿಗೆ ಸಾಥ್ ನೀಡಿದ ಇದೇ ಪ್ರೌಢಶಾಲೆಯ ಇನ್ನೂ 6 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ನಾಗಾಂಜಲಿ ನಾಯ್ಕ ಶೇ.100 ಶಾಲೆಗೆ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ,…

Share happily:
Read More

ಪುಲ್ವಾಮಾ ದಾಳಿಯ ಪ್ರತೀಕಾರದ ಅಂಗವಾಗಿ ಕೊಂಕಣದ ಸಿ.ವಿ.ಎಸ್.ಕೆ ಹೈಸ್ಕೂಲ್‌ನಲ್ಲಿ ವಿಜಯೋತ್ಸವ ಆಚರಣೆ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಹೈಸ್ಕೂಲ್‌ನಲ್ಲಿ ಇಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಉಗ್ರನೆಲೆಗಳನ್ನು ನಾಶಮಾಡಿ ಪುಲ್ವಾಮಾ ದಾಳಿಯ ವಿರುದ್ಧ ತೆಗೆದುಕೊಂಡ ಪ್ರತೀಕಾರ ಕ್ರಮವನ್ನು ಬೆಂಬಲಿಸಿ ವಿಜಯೋತ್ಸವವನ್ನು ಆಚರಿಸಲಾಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಘೋಷ ಮೊಳಗಿಸಿ ವಿದ್ಯಾರ್ಥಿಗಳು ಸಂಭ್ರಮಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಕ ಚಿದಾನಂದ ಭಂಡಾರಿ, ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಧ್ಯೇಯವಾಕ್ಯವೇ “ರಾಷ್ಟನಿರ್ಮಾಣ ಮಂದಿರವಿದು ಕೈ ಮುಗಿದು ಒಳಗೆ ಬಾ” ಎಂಬುದಾಗಿದ್ದು ನಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗಳ ಕಣಕಣದಲ್ಲೂ ರಾಷ್ಟ್ರಭಕ್ತಿಯನ್ನು ಮೂಡಿಸುವುದೇ ನಮ್ಮ ಗುರಿ. ಭಾರತದ ವೀರ ಸೈನಿಕರ ಸಾಹಸವನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಉಗ್ರರಿಂದ ಸಾವನ್ನಪ್ಪಿದ ಯೋಧರ ಕುಟುಂಬದ ನೋವಿನಲ್ಲಿ ನಾವೆಲ್ಲರೂ ಭಾಗಿಗಳು. ನಾಳೆ ದೇಶದ ಮೇಲೆ ಯುದ್ಧದ ಕಾರ್ಮೋಡ ಕವಿದರೆ ಎಲ್ಲರೂ ದೇಶದ ಗೆಲುವಿಗೆ ತಮ್ಮ ಕೊಡುಗೆ ನೀಡಲು ಸಿದ್ಧರಿರಬೇಕೆಂದು ಕರೆನೀಡಿದರು. ವಿದ್ಯಾರ್ಥಿಗಳು ಜೈಜವಾನ್ ಜೈಕಿಸಾನ್,…

Share happily:
Read More

ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು

Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಸಂಪನ್ನಗೊಂಡ ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ದಾಪುಗಾಲಿಟ್ಟಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕರುಗಳಾದ ಎಚ್.ಆರ್.ರವಿಶಂಕರ ಹಾಗೂ ಭಾಸ್ಕರ ಹೆಗಡೆ ಇವರ ಸೂಕ್ತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸೂರ್ಯಕಿರಣ ಎನ್. ಮತ್ತು ಪ್ರಮೋದ ಎಲ್. ನಾಯ್ಕ ಇವರು ಸಾರಿಗೆ ಮತ್ತು ಸಂವಹನ ವಿಷಯದಡಿ ಪ್ರದರ್ಶಿಸಿದ ವಿಜ್ಞಾನ ಮಾದರಿಯು ಭಾರತದ ದಕ್ಷಿಣ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಶೈಲಿಯಲ್ಲಿ ವಿಶಿಷ್ಟ ಛಾಪನ್ನು ಮೂಡಿಸುವಲ್ಲಿ ಹೆಸರುವಾಸಿಯಾಗಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯು ಈ ಮೂಲಕ ಸಂಸ್ಥೆಯ ಸಾಧನೆಯ…

Share happily:
Read More

ರಾಜ್ಯ ಮಟ್ಟಕ್ಕೆ ಕೊಂಕಣದ ವಿದ್ಯಾರ್ಥಿಗಳು

Share happily:

ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಹಯೋಗದೊಂದಿಗೆ ಕುಮಟಾದ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್‌ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ 2018-19ರಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿ ಮಂಡ್ಯದಲ್ಲಿ ಜರುಗಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕವಿತಾ ಗೋಷ್ಠಿಯಲ್ಲಿ ಶಿಲ್ಪಾ ಡಿ. ಭಟ್ಟ ಪ್ರಥಮ, ಕಾರ್ತಿಕ ಪಿ. ನಾಯ್ಕ ದ್ವಿತೀಯ ಸ್ಥಾನಗಳಿಸಿದರೆ, ಕಥಾ ಗೋಷ್ಠಿಯಲ್ಲಿ ಪ್ರಗತಿ ಜಿ. ಹೆಗಡೆ ಪ್ರಥಮ ಹಾಗೂ ಚುಟುಕು ಗೋಷ್ಠಿಯಲ್ಲಿ ಸಂಜಯ ಡಿ. ನಾಯ್ಕ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಜ್ಯಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ, ಶಿಕ್ಷಕರು, ಶೈಕ್ಷಣಿಕ ಸಲಹೆಗಾರರು, ಪಾಲಕರು ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

Share happily:
Read More

ಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ

Share happily:

ಕುಮಟಾ: ಅಪರ ಆಯುಕ್ತಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಡಾ. ಎಚ್. ಎಫ್. ಕಟ್ಟೀಮನಿ ಪ್ರೌಢಶಿಕ್ಷಣ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಕುಮಟಾದ ಮಹಾತ್ಮಾ ಗಾಂಧಿ ಪ್ರೌಢಶಾಲೆ ಚಿತ್ರಿಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ, 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ವಿಷಯವಾರು ಗರಿಷ್ಠ ಶೇಕಡಾವಾರು ಸರಾಸರಿ ಅಂಕಗಳನ್ನು ದಾಖಲಿಸಿದ ಕುಮಟಾದ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ನಾಲ್ಕು ವಿಷಯ ಶಿಕ್ಷಕರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿಯವರು ಗೌರವಿಸಿ ಸನ್ಮಾನಿಸಿದರು. ವಿಷಯವಾರು ಬೋಧನೆಯ ಅನುಸಾರ ಇಂಗ್ಲೀಷ್ ವಿಷಯದಲ್ಲಿ ಶ್ರೀಮತಿ ವಿನಯಾ ನಾಯಕ ಶೇ.92.48, ಸಮಾಜ ವಿಜ್ಞಾನ ವಿಷಯದಲ್ಲಿ ಶ್ರೀ ಪ್ರಕಾಶ ಗಾವಡಿ ಶೇ.91.41, ಗಣಿತ ವಿಷಯದಲ್ಲಿ ಶ್ರೀ ರಾಜೇಶ ಎಚ್.ಜಿ ಶೇ.83.35, ಹಾಗೂ ವಿಜ್ಞಾನ ವಿಷಯದಲ್ಲಿ ಶ್ರೀ ಭಾಸ್ಕರ ಹೆಗಡೆ ಶೇ.74.1 ಸರಾಸರಿ ಶೇಕಡಾವಾರು ಅಂಕ…

Share happily:
Read More

ರಾಜ್ಯ ಮಟ್ಟಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು

Share happily:

ಕುಮಟಾ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ವಿಶಿಷ್ಟ ಶೈಲಿಯಲ್ಲಿ ಛಾಪನ್ನು ಮೂಡಿಸುವಲ್ಲಿ ಸದಾ ಹೆಸರುವಾಸಿಯಾಗಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರವಾರದಲ್ಲಿ ಇತ್ತಿತ್ತೀಚೆಗೆ ಸಂಪನ್ನಗೊಂಡ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ಸಾ.ಶಿ.ಇಲಾಖೆ ಕಾರವಾರ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಜಿಲ್ಲಾ ವಿಜ್ಞಾನ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 26ನೇ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳು ಎಂಬ ಶೀರ್ಷಿಕೆಯಡಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಶಾಲ್ಮಲಿ ಎಸ್. ಮಂಕೀಕರ್ ಹಾಗೂ ಕುಮಾರಿ ಖುಷಿ ಸಿ. ಎಚ್. ಇವರು ಗ್ರಾಮೀಣ ಭಾಗದ ಸೀನಿಯರ್ಸ್ ವಿಭಾಗದಲ್ಲಿ ಸಕ್ಕರೆರೋಗ – ಕಾರಣಗಳು, ನಿರ್ವಹಣೆ…

Share happily:
Read More