ಕುಮಟಾ: ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಕುಮಟಾದ ಪ್ರಸಿದ್ಧ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ, ರೌಪ್ಯ ಮಹೋತ್ಸವದ ಈ ಸುಸಂದರ್ಭದಲ್ಲಿ, ‘ಹಳೆ ಬೇರು-ಹೊಸ ಚಿಗುರು’ ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ಪರಿಸರದಲ್ಲಿ ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮ ಕಾರ್ಯಕ್ರಮ ಅಭೂತಪೂರ್ವವಾಗಿ ಜರುಗಿ ಯಶಸ್ವಿಯಾಯಿತು. ‘ದೀಪಾವಳಿ ಮೇಳ’ದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ, ಶಿಕ್ಷಣ ಪ್ರೇಮಿ ಹಾಗೂ ಗುರುಪ್ರಸಾದ ಪ್ರೌಢಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜಯಂತ ನಾಯ್ಕ ಉದ್ಘಾಟಿಸಿದರು. ಸಂಸ್ಥೆಯ ಕುರಿತಾಗಿ ಹೆಮ್ಮೆಯ ಮಾತಗಳನ್ನಾಡಿದ ಅವರು, ತಮ್ಮ ಮೊಮ್ಮಕ್ಕಳು ಇದೇ ಸಂಸ್ಥೆಯಲ್ಲಿ ಕಲಿಯುತ್ತಿದ್ದು ಅವರಲ್ಲಿ ಸಂಸ್ಕೃತಿ ಮೂಡುವಲ್ಲಿ ಶಿಕ್ಷಕರು ಹಾಗೂ ಸಂಸ್ಥೆಯವರ ಕಾರ್ಯ, ಕಾಳಜಿ ಶ್ಲಾಘನೀಯ ಎಂದು ನಿದರ್ಶನ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಜತ…
Read MoreCategory: RDSH
ಕೊಂಕಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಅಂಗಸಂಸ್ಥೆಗಳಿಂದ 72ನೇ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಟ್ರಸ್ಟಿನ ಗೌರವ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ನಮ್ಮ ರಾಷ್ಟ್ರವನ್ನು ಅಗ್ರಮಾನ್ಯ ರಾಷ್ಟ್ರವಾಗಿ ಪರಿವರ್ತಿಸಲು ಎಲ್ಲರೂ ಪಣತೊಡಬೇಕು. ನಿರಂತರವಾಗಿ ದೇಶದ ಗಡಿಯಲ್ಲಿ ಪಹರೆ ಕಾಯುವ ನಮ್ಮ ಯೋಧರನ್ನು ಗೌರವಿಸಿ. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವರ ಕಾಣಿಕೆ ಅಪಾರ. ಅದೇ ರೀತಿ ಗಳಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆ ಹಾಗೂ ಕರ್ತವ್ಯವಾಗಿದೆ, ಆ ನಿಟ್ಟಿನಲ್ಲಿ ಸರ್ವರೂ ದೇಶಪ್ರೇಮ ಬೆಳೆಸಿಕೊಳ್ಳಿ ಎಂದು ಕರೆ ನೀಡುತ್ತಾ, ಸಂಸ್ಥೆಯ ಬೆಳ್ಳಿ ಹಬ್ಬದ ಈ ಸುಸಂದರ್ಭದಲ್ಲಿ ನಮ್ಮ ಸಂಸ್ಥೆಯಲ್ಲಿ ವ್ಯಾಸಂಗಮಾಡುತ್ತಿರುವ ವೀರಯೋಧರ ಮಕ್ಕಳಿಗೆ ಕಲಿಕಾ ಶುಲ್ಕದಲ್ಲಿ ಸಂಸ್ಥೆಯ ವತಿಯಿಂದ ವಿಶೇಷ ರಿಯಾಯಿತಿಯನ್ನು ನೀಡುವುದಾಗಿ ಘೋಷಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಅಭಿಮಾನದ ದ್ಯೋತಕವಾಗಿ ನಡೆಸಿದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ದೇಶಕ್ಕಾಗಿ…
Read Moreರಂಗಾ ದಾಸ ಶಾನಭಾಗ ಹೆಗಡೆಕರ ಬಾಲಮಂದಿರದ ಪುಟಾಣಿಗಳ ಪ್ರತಿಭಾ ಪ್ರದರ್ಶನ
ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ರಂಗಾ ದಾಸ ಶಾನಭಾಗ ಹೆಗಡೆಕರ ಬಾಲಮಂದಿರದ ಮಕ್ಕಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ನರ್ಸರಿ, ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳು ಕೃಷ್ಣ ವೇಷ, ಹನುಮಂತನ ವೇಷ, ಬುಡಬುಡಕಿದಾಸ, ಬಳೆಗಾರನ ವೇಷ ಮುಂತಾದ ವೇಷಭೂಷಣ ಮಾಡಿ ಜನರಿಂದ ಮೆಚ್ಚುಗೆ ಗಳಿಸಿದರು.ನೃತ್ಯ, ಹಾಡು, ಕಥೆಗಳನ್ನು ಹೇಳಿ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹೊಮ್ಮಿಸಿದರು. ಮುಖ್ಯಾಧ್ಯಾಪಕರು, ಶಿಕ್ಷಕವೃಂದ ಹಾಗೂ ಶೈಕ್ಷಣಿಕ ಸಲಹೆಗಾರರಾದ ಶ್ರೀ.ಆರ್.ಎಸ್.ದೇಶಭಂಡಾರಿಯವರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದು ಮಕ್ಕಳ ಪ್ರತಿಭೆಯ ಅನಾವರಣವನ್ನು ಕಣ್ತುಂಬಿಕೊಂಡರು.
Read More