ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಾಗಿದ್ದು, ಪರೀಕ್ಷೆಗೆ ಕುಳಿತ ಒಟ್ಟೂ 120 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಒಬ್ಬ ವಿದ್ಯಾರ್ಥಿ ಶೇ. 98 ಕ್ಕಿಂತ ಅಧಿಕ ಹಾಗೂ 19 ವಿದ್ಯಾರ್ಥಿಗಳು 95 ಕ್ಕಿಂತ ಅಧಿಕ, ಮತ್ತು ಒಟ್ಟೂ 92 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (ಡಿಸ್ಟಿಂಕ್ಷನ್) ಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರು, ಕಾರ್ಯದರ್ಶಿಗಳು, ವಿಶ್ವಸ್ಥರು, ಶೈಕ್ಷಣಿಕ ಸಲಹೆಗಾರರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕರು, ಪಾಲಕರು, ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Read More