ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್‍ನ್ನು ಪುರಸಭಾ ಸದಸ್ಯರಾದ ಪ್ರಶಾಂತ ನಾಯ್ಕ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಕಾರಣವಾಗಬೇಕೆಂದು ಕರೆನೀಡಿದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಚಾರ್ಯ ಡಿ.ಎಸ್.ಭಟ್ಟ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದಿಂದ ಸಾಧನೆ ಮಾಡಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಹಲವು ಉದಾಹರಣೆಗಳ ಮೂಲಕ ತಿಳಿಹೇಳಿದರು. ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ಹೊಸ ನೇತಾರರಾಗುವ ಗುಣವನ್ನು ಹೇಗೆ ಬೆಳೆಸುತ್ತದೆ ಎಂಬುದನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿಗಳಾದ ಡಿ.ಡಿ.ಕಾಮತ ಮಾತನಾಡಿ, ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ, ಸೋಲು-ಗೆಲುವು ಎಲ್ಲವನ್ನೂ ಎದುರಿಸುವ ಶಕ್ತಿಯನ್ನು ಈಗಿಂದಲೇ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಶಾಲಾ ಸಂಸತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಅನಿರುದ್ಧ ಭಟ್ಟಕೆರೆ ಹಾಗೂ ಸುದಿತಿ ಕಾಮತ್ ಮಾತನಾಡಿದರು. ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ ವೇದಿಕೆಯಲ್ಲಿದ್ದರು. ದೈಹಿಕ…
Read MoreMonth: June 2018
ಕೊಂಕಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆ, ಬಿ.ಕೆ.ಭಂಡಾರ್ಕರ್ ರವರ ಸರಸ್ವತಿ ಪ.ಪೂ ಕಾಲೇಜಿನ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸರಸ್ವತಿ ಮಾಳಪ್ಪ ಕಾಮತ ಕೃಷಿ-ವೃತ್ತಿ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಪೂರ್ಣಿಮಾ ಪೈ, ಹಿರಿಯ ಸಿವಿಲ್ ನ್ಯಾಯಾಧೀಶರು, ಕುಮಟಾ ಇವರು “ಧನಾತ್ಮಕ ಚಿಂತನೆಯೊಂದಿಗೆ ಸತತ ಪ್ರಯತ್ನ ನಡೆಸಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳು ಕೇವಲ ಎಂಜಿನಿಯರಿಂಗ್, ಮೆಡಿಕಲ್ ವೃತ್ತಿಗಳಷ್ಟಕ್ಕೆ ಮಾತ್ರ ಅಂಟಿಕೊಳ್ಳದೇ, ಕಾನೂನು ಇನ್ನಿತರ ವೃತ್ತಿಗಳಲ್ಲಿಯೂ ತೊಡಗಿಸಿಕೊಳ್ಳುವುದರ ಮೂಲಕ ಸಮಾಜ ಸೇವೆ ಮಾಡಬೇಕು” ಎಂದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಪಿ.ಕೆ.ಪ್ರಕಾಶ, ನಿವೃತ್ತ ಡಿ.ಡಿ.ಪಿ.ಐ, ಕಾರವಾರ ಇವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೌಲ್ಯಗಳು ಮತ್ತು ಸಂಸ್ಕೃತಿ ಅವರ ಉಜ್ವಲ…
Read More