ಕೊಂಕಣದಲ್ಲಿ ವಿನಯ ಸ್ಮೃತಿ ಹಾಗೂ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

Share happily:

ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಅಂಗಸಂಸ್ಥೆಗಳ ಆಶ್ರಯದಲ್ಲಿ ವಿನಯಸ್ಮೃತಿ ಹಾಗೂ ಕೊಂಕಣಿ ಮಾನ್ಯತಾ ದಿವಸ್ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಗಿಬ್ ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕಿ ದಿ. ವಿನಯಾ ಶಾನಭಾಗರವರ ಸ್ಮರಣಾರ್ಥ ಪ್ರತಿವರ್ಷ ನೀಡಲಾಗುವ ‘ವಿನಯಸ್ಮೃತಿ ಸಮರ್ಥ ಶಿಕ್ಷಕ ಪುರಸ್ಕಾರ’ವನ್ನು ಸಂತೆಗುಳಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸಾಧನಾ ಪೈ ಇವರಿಗೆ ನೀಡಿ ಪುರಸ್ಕರಿಸಲಾಯಿತು. ನಂತರ ಅವರು ಮಾತನಾಡಿ, “ತಮಗೆ ಬಂದಿರುವ ಈ ಪ್ರಶಸ್ತಿ ಪ್ರಸಾದವೆಂದು ಸಂಬೋಧಿಸಿದರಲ್ಲದೆ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಯಶಸ್ಸಿನೆಡೆಗೆ ಸಾಗಬೇಕು” ಎಂದರು. ಕಾರ್ಯಕ್ರಮದ ಉದ್ಘಾಟಕರಾಗಿ ಉಪಸ್ಥಿತರಿದ್ದ ಶ್ರೀಯುತ ಎಸ್. ಜೆ. ಕೈರನ್, ನಿವೃತ್ತ ಉಪಾಧ್ಯಾಪಕರು, ಹೊನ್ನಾವರ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹೆಚ್ಚಿನ ಮಾರ್ಕ್ಸ್ ಬರದಿದ್ದರೂ, ರಿಮಾರ್ಕ್ಸ್ ಬರದ ಹಾಗೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಶಿಕ್ಷಕನಾದವನು ವಿದ್ಯಾರ್ಥಿಗಳಿಗೆ ಅರ್ಚಕನಂತಿರಬೇಕು, ಅಂದಾಗ ಮಾತ್ರ ವಿದ್ಯಾರ್ಥಿಗಳು ಮೌಲ್ಯಯುತ, ಸಂಸ್ಕೃತಿಯುತರಾಗಲು ಸಾಧ್ಯ” ಎಂದು ನುಡಿದರು. ಅತಿಥಿಗಳಾಗಿ ಉಪಸ್ಥಿತರಿದ್ದ…

Share happily:
Read More

ಕೊಂಕಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಅಂಗಸಂಸ್ಥೆಗಳಿಂದ  72ನೇ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಟ್ರಸ್ಟಿನ ಗೌರವ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ನಮ್ಮ ರಾಷ್ಟ್ರವನ್ನು ಅಗ್ರಮಾನ್ಯ ರಾಷ್ಟ್ರವಾಗಿ ಪರಿವರ್ತಿಸಲು ಎಲ್ಲರೂ ಪಣತೊಡಬೇಕು. ನಿರಂತರವಾಗಿ ದೇಶದ ಗಡಿಯಲ್ಲಿ ಪಹರೆ ಕಾಯುವ ನಮ್ಮ ಯೋಧರನ್ನು ಗೌರವಿಸಿ. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವರ ಕಾಣಿಕೆ ಅಪಾರ. ಅದೇ ರೀತಿ ಗಳಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆ ಹಾಗೂ ಕರ್ತವ್ಯವಾಗಿದೆ, ಆ ನಿಟ್ಟಿನಲ್ಲಿ ಸರ್ವರೂ ದೇಶಪ್ರೇಮ ಬೆಳೆಸಿಕೊಳ್ಳಿ ಎಂದು ಕರೆ ನೀಡುತ್ತಾ, ಸಂಸ್ಥೆಯ ಬೆಳ್ಳಿ ಹಬ್ಬದ ಈ ಸುಸಂದರ್ಭದಲ್ಲಿ ನಮ್ಮ ಸಂಸ್ಥೆಯಲ್ಲಿ ವ್ಯಾಸಂಗಮಾಡುತ್ತಿರುವ ವೀರಯೋಧರ ಮಕ್ಕಳಿಗೆ ಕಲಿಕಾ ಶುಲ್ಕದಲ್ಲಿ ಸಂಸ್ಥೆಯ ವತಿಯಿಂದ ವಿಶೇಷ ರಿಯಾಯಿತಿಯನ್ನು ನೀಡುವುದಾಗಿ ಘೋಷಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಅಭಿಮಾನದ ದ್ಯೋತಕವಾಗಿ ನಡೆಸಿದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ದೇಶಕ್ಕಾಗಿ…

Share happily:
Read More