ಕುಮಟಾ: ಇಲ್ಲಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ರಜತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು ಕುಮಟಾದ ಬ್ಲಡ್ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಿಬ್ಬಂದಿಗಳಾದ ಪ್ರಕಾಶ ಗಾವಡಿ, ಹರ್ಷಾ ಶಾಸ್ತ್ರಿ, ಕಾವ್ಯಶ್ರೀ ಪಟಗಾರ, ರಾಮನಾಥ ಶಾನಭಾಗ, ರವಿ ಮುಕ್ರಿ ಈ ಸಂದರ್ಭದಲ್ಲಿ ರಕ್ತದಾನ ಮಾಡುವುದರ ಮೂಲಕ ತಮ್ಮ ಔದಾರ್ಯತೆಯನ್ನು ಮೆರೆದಿದ್ದಾರೆ. ಕುಮಟಾ ಬ್ಲಡ್ ಬ್ಯಾಂಕ್‌ನ ಮುಖ್ಯಸ್ಥರಾದ ಡಾ| ಮಧುಕರ ಕೆ. ನಾಯ್ಕ ಹಾಗೂ ಸಂಗಡಿಗರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ‘ರಕ್ತದಾನ-ಜೀವದಾನ’ ಶೀರ್ಷಿಕೆಯಡಿ ಕೈಗೊಂಡ ಈ ಕಾರ್ಯಕ್ಕೆ ಕೊಂಕಣ ಸಂಸ್ಥೆಯ ಪದಾಧಿಕಾರಿಗಳು, ಶೈಕ್ಷಣಿಕ ಸಲಹೆಗಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
Read MoreMonth: December 2018
ಜಿಲ್ಲಾ ಮಟ್ಟದಲ್ಲಿ ಮಿಂಚಿದ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು
ಕುಮಟಾ: ತಾಲೂಕಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸದಾ ಮುಂದು ಎನಿಸಿಕೊಂಡಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಅಂಕೋಲಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗಲ್ಲಿ ಮಿಂಚಿ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿತಂದಿರುತ್ತಾರೆ. ಕಿರಿಯರ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶ್ರೇಯಾ ಗಿರೀಶ ಹೆಬ್ಬಾರ ಭಕ್ತಿಗೀತೆ ಸ್ಫರ್ಧೆಯಲ್ಲಿ ಪ್ರಥಮ, ಆಶುಭಾಷಣ ಸ್ಪರ್ಧೆಯಲ್ಲಿ ಸ್ನೇಹಾ ಉದಯ ನಾಯ್ಕ ಪ್ರಥಮಸ್ಥಾನ ಗಳಿಸಿರುತ್ತಾರೆ. ಹಿರಿಯರ ವಿಭಾಗದ ಸ್ಫರ್ಧೆಗಳಾದ ಇಂಗ್ಲೀಷ್ ಕಂಠಪಾಠ, ಹಾಗೂ ಸಾಭಿನಯಗೀತೆಯಲ್ಲಿ ಸೃಜನಾ ದತ್ತಾ ನಾಯ್ಕ ಪ್ರಥಮ ಸ್ಥಾನ ಪಡೆದು ತೃತೀಯ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾಳೆ. ಪಲ್ಲವಿ ಶಾನಭಾಗ ತುಳು ಕಂಠಪಾಠ, ಅಕ್ಷತಾ ಶಾನಭಾಗ ಮರಾಠಿ ಕಂಠಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಸಾದನೆ ಮಾಡಿದರೆ, ಸೋನಾಲಿ ಶೇಟ್, ನಿಖಿಲ್ ಪಟಗಾರ ಇವರು ಹಿರಿಯ…
Read Moreರಾಜ್ಯ ಮಟ್ಟಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು
ಕುಮಟಾ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ವಿಶಿಷ್ಟ ಶೈಲಿಯಲ್ಲಿ ಛಾಪನ್ನು ಮೂಡಿಸುವಲ್ಲಿ ಸದಾ ಹೆಸರುವಾಸಿಯಾಗಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರವಾರದಲ್ಲಿ ಇತ್ತಿತ್ತೀಚೆಗೆ ಸಂಪನ್ನಗೊಂಡ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ಸಾ.ಶಿ.ಇಲಾಖೆ ಕಾರವಾರ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಜಿಲ್ಲಾ ವಿಜ್ಞಾನ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 26ನೇ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳು ಎಂಬ ಶೀರ್ಷಿಕೆಯಡಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಶಾಲ್ಮಲಿ ಎಸ್. ಮಂಕೀಕರ್ ಹಾಗೂ ಕುಮಾರಿ ಖುಷಿ ಸಿ. ಎಚ್. ಇವರು ಗ್ರಾಮೀಣ ಭಾಗದ ಸೀನಿಯರ್ಸ್ ವಿಭಾಗದಲ್ಲಿ ಸಕ್ಕರೆರೋಗ – ಕಾರಣಗಳು, ನಿರ್ವಹಣೆ…
Read More