ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಸಂಪನ್ನಗೊಂಡ ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ದಾಪುಗಾಲಿಟ್ಟಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕರುಗಳಾದ ಎಚ್.ಆರ್.ರವಿಶಂಕರ ಹಾಗೂ ಭಾಸ್ಕರ ಹೆಗಡೆ ಇವರ ಸೂಕ್ತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸೂರ್ಯಕಿರಣ ಎನ್. ಮತ್ತು ಪ್ರಮೋದ ಎಲ್. ನಾಯ್ಕ ಇವರು ಸಾರಿಗೆ ಮತ್ತು ಸಂವಹನ ವಿಷಯದಡಿ ಪ್ರದರ್ಶಿಸಿದ ವಿಜ್ಞಾನ ಮಾದರಿಯು ಭಾರತದ ದಕ್ಷಿಣ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಶೈಲಿಯಲ್ಲಿ ವಿಶಿಷ್ಟ ಛಾಪನ್ನು ಮೂಡಿಸುವಲ್ಲಿ ಹೆಸರುವಾಸಿಯಾಗಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯು ಈ ಮೂಲಕ ಸಂಸ್ಥೆಯ ಸಾಧನೆಯ…
Read MoreDay: January 12, 2019
ರಾಜ್ಯ ಮಟ್ಟಕ್ಕೆ ಕೊಂಕಣದ ವಿದ್ಯಾರ್ಥಿಗಳು
ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಹಯೋಗದೊಂದಿಗೆ ಕುಮಟಾದ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ 2018-19ರಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿ ಮಂಡ್ಯದಲ್ಲಿ ಜರುಗಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕವಿತಾ ಗೋಷ್ಠಿಯಲ್ಲಿ ಶಿಲ್ಪಾ ಡಿ. ಭಟ್ಟ ಪ್ರಥಮ, ಕಾರ್ತಿಕ ಪಿ. ನಾಯ್ಕ ದ್ವಿತೀಯ ಸ್ಥಾನಗಳಿಸಿದರೆ, ಕಥಾ ಗೋಷ್ಠಿಯಲ್ಲಿ ಪ್ರಗತಿ ಜಿ. ಹೆಗಡೆ ಪ್ರಥಮ ಹಾಗೂ ಚುಟುಕು ಗೋಷ್ಠಿಯಲ್ಲಿ ಸಂಜಯ ಡಿ. ನಾಯ್ಕ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಜ್ಯಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ, ಶಿಕ್ಷಕರು, ಶೈಕ್ಷಣಿಕ ಸಲಹೆಗಾರರು, ಪಾಲಕರು ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.
Read Moreಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ
ಕುಮಟಾ: ಅಪರ ಆಯುಕ್ತಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಡಾ. ಎಚ್. ಎಫ್. ಕಟ್ಟೀಮನಿ ಪ್ರೌಢಶಿಕ್ಷಣ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಕುಮಟಾದ ಮಹಾತ್ಮಾ ಗಾಂಧಿ ಪ್ರೌಢಶಾಲೆ ಚಿತ್ರಿಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ, 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ವಿಷಯವಾರು ಗರಿಷ್ಠ ಶೇಕಡಾವಾರು ಸರಾಸರಿ ಅಂಕಗಳನ್ನು ದಾಖಲಿಸಿದ ಕುಮಟಾದ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ನಾಲ್ಕು ವಿಷಯ ಶಿಕ್ಷಕರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿಯವರು ಗೌರವಿಸಿ ಸನ್ಮಾನಿಸಿದರು. ವಿಷಯವಾರು ಬೋಧನೆಯ ಅನುಸಾರ ಇಂಗ್ಲೀಷ್ ವಿಷಯದಲ್ಲಿ ಶ್ರೀಮತಿ ವಿನಯಾ ನಾಯಕ ಶೇ.92.48, ಸಮಾಜ ವಿಜ್ಞಾನ ವಿಷಯದಲ್ಲಿ ಶ್ರೀ ಪ್ರಕಾಶ ಗಾವಡಿ ಶೇ.91.41, ಗಣಿತ ವಿಷಯದಲ್ಲಿ ಶ್ರೀ ರಾಜೇಶ ಎಚ್.ಜಿ ಶೇ.83.35, ಹಾಗೂ ವಿಜ್ಞಾನ ವಿಷಯದಲ್ಲಿ ಶ್ರೀ ಭಾಸ್ಕರ ಹೆಗಡೆ ಶೇ.74.1 ಸರಾಸರಿ ಶೇಕಡಾವಾರು ಅಂಕ…
Read More