ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರತಿಸಲದಂತೆ ಈ ವರ್ಷವೂ ಶೇ.100ರಷ್ಟಾಗಿದ್ದು, ರಾಜ್ಯಮಟ್ಟಕ್ಕೆ ಪ್ರಥಮ ರ‍್ಯಾಂಕ್ ಪಡೆಯುವುದರ ಮೂಲಕ ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶ ದಾಖಲಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಲೆಯ 7 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟಾಪ್ 10 ರ‍್ಯಾಂಕಿಂಗ್ ಪಟ್ಟಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿನಿ ನಾಗಾಂಜಲಿ ಪರಮೇಶ್ವರ ನಾಯ್ಕ ಪೂರ್ಣಾಂಕ (625 ಕ್ಕೆ 625) ಗಳಿಕೆಯ ವಿಶಿಷ್ಟ ಹಾಗೂ ಅಪರೂಪದ ಚಿನ್ನದ ಸಾಧನೆಗೈದು ಸಂಸ್ಥೆಯ ಘನತೆಯನ್ನು ಉತ್ತುಂಗಕ್ಕೇರಿಸಿದ್ದು ಮಾತ್ರವಲ್ಲದೆ ಇಡೀ ರಾಜ್ಯವೇ ಉತ್ತರ ಕನ್ನಡದ ಕುಮಟಾದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ. ಇವಳಿಗೆ ಸಾಥ್ ನೀಡಿದ ಇದೇ ಪ್ರೌಢಶಾಲೆಯ ಇನ್ನೂ 6 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ನಾಗಾಂಜಲಿ ನಾಯ್ಕ ಶೇ.100 ಶಾಲೆಗೆ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ,…
Read More