ಕೊಂಕಣದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಿಕ್ಷಕರ ಅಭಿನಂದನಾ ಕಾರ್ಯಕ್ರಮ

Students & Teachers Felicitation Program 2019
Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ಹಾಗೂ ಸರಸ್ವತಿ ಪಿ.ಯು. ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನ, ನಿತ್ಯಾನಂದ ನಗರ, ಧರ್ಮಸ್ಥಳ ಇವರ ದಿವ್ಯ ಸಾನಿಧ್ಯದಲ್ಲಿ ಏರ್ಪಡಿಸಲಾಗಿತ್ತು. ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ಹೆಚ್ಚಿಸಿದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗಾಂಜಲಿ ನಾಯ್ಕ ಜೊತೆ ರಾಜ್ಯಕ್ಕೆ ಎಂಟು ರ‍್ಯಾಂಕ್‌ಗಳನ್ನು ಪಡೆದ ಎಂಟು ವಿದ್ಯಾರ್ಥಿಗಳನ್ನು ಹಾಗೂ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಪರೀಕ್ಷೆಯಲ್ಲಿ ಪೂರ್ಣಾಂಕ (625 ಕ್ಕೆ 625) ಗಳಿಸಿ ಅದ್ಭುತ ಸಾಧನೆಗೈದುದಕ್ಕಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ 25,000 ರೂ., ಟ್ರಸ್ಟಿಗಳಾದ ಭರತ ಭಂಡಾರಕರ್ ಇವರ ವೈಯಕ್ತಿಕ 25,000 ರೂ.…

Share happily:
Read More