ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಪ್ರತಿಸಲದಂತೆ ಈ ವರ್ಷವೂ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗಾಗಿ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆರ್ಎಸ್ಎಸ್ ಹಿರಿಯ ಪ್ರಚಾರಕ ಸು.ರಾಮಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಈ ದೇಶದ ಪ್ರತಿಯೊಂದು ಮಗು ದೇಶಭಕ್ತನಾಗಬೇಕು. ನಾವು ಮಾಡುವ ಕೈಂಕರ್ಯ ಭಾರತ ಮಾತೆಯ ಗೌರವವನ್ನು ಹೆಚ್ಚಿಸಬೇಕು ಎಂದು ಹಲವಾರು ಮಹಾಪುರುಷರ ಉದಾಹರಣೆಯೊಂದಿಗೆ ವಿವರಿಸಿದರು. ಆಶೀರ್ವಾದಕ್ಕೆ ನಮ್ಮ ಸಂಸ್ಕೃತಿಯಲ್ಲಿ ಅಪಾರ ಮಹತ್ವವಿದ್ದು, ಪುರಾಣದಲ್ಲಿ ಕೃಷ್ಣ ದ್ರೌಪದಿಗೆ, ಭೀಷ್ಮ-ದುರ್ಯೋಧನರಿಗೆ, ಗಾಂಧಾರಿ-ಪಾಂಡವರಿಗೆ ಆಶೀರ್ವಾದ ಮಾಡಿದ ಸನ್ನಿವೇಶವನ್ನು ರೋಮಾಂಚನಕಾರಿಯಾಗಿ ಬಣ್ಣಿಸಿದರು. ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಯಾವತ್ತೂ ಶ್ಲಾಘನೆಗೆ ಒಳಗಾಗಿದೆ, ಇದು ಸರ್ವರಿಗೂ ತಿಳಿದ ವಿಚಾರವೇ ಆಗಿದೆ ಎಂದರು. ಕಾರ್ಯಕ್ರಮದ ಅತಿಥಿಯಾಗಿ ಉಪಸ್ಥಿತರಿದ್ದ ಇದೇ ಶಾಲೆಯ ಹಳೆಯ ವಿದ್ಯಾರ್ಥಿನಿ ಡಾ.ಜಯಶ್ರೀ…
Read More