ಕೊಂಕಣದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಶಿಕ್ಷಣ ಸಂಸ್ಥೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ವಿಶ್ವ ಸಾರಸ್ವತ ಫೆಡರೇಶನ್ ಅಧ್ಯಕ್ಷ ಹಾಗೂ ಹಾಂಗ್ಯೊ ಐಸ್‌ಕ್ರೀಂ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ ಪೈ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಮುರಳೀಧರ ಪ್ರಭು, 97 ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಇಂದು ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಲಿಯುವ ಆಸಕ್ತಿ ಇರುವ ಸರಿ ಸುಮಾರು 50 ಬಡ ಪ್ರತಿಭಾವಂತ ಮಕ್ಕಳಿಗೆ ಬಹುತೇಕ ಎಲ್ಲವೂ ಉಚಿತ ಮಾಡಿದ್ದೇವೆ. ದಿನಕರ ದೇಸಾಯಿಯವರ ಆದರ್ಶವನ್ನು ಮುಂದಿಟ್ಟು ಶಿಕ್ಷಣ ದಾನಿಗಳಿಂದಲೇ ನಡೆಸಿಕೊಂಡು ಹೋಗುತ್ತಿರುವ ಸಂಸ್ಥೆ ಇದಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಟಾಪ್‌ 10 ರ‍್ಯಾಂಕ್‌ನಲ್ಲಿ ಪ್ರತಿ ವರ್ಷ ನಮ್ಮ ಶಾಲೆಯ ಐದರಿಂದ ಆರು ವಿದ್ಯಾರ್ಥಿಗಳಾದರೂ ಇದ್ದೇ ಇರುತ್ತಾರೆ ಎಂಬುದು ನಮಗೆ ಹೆಮ್ಮೆ. ಈ ಸಂಸ್ಥೆ ಗೆ ಪ್ರದೀಪ…

Share happily:
Read More

ಕೊಂಕಣದ ಎಟಿಎಲ್‌ನಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಎಕ್ಸ್ಪೋ 2022

Share happily:

ಕುಮಟಾ: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಇಲ್ಲಿನ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ ಅಟಲ್‌ ಟಿಂಕರಿಂಗ್‌ ಲ್ಯಾಬ್‌(ಎಟಿಎಲ್‌)ನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ(ಎಕ್ಸ್ಪೋ 2022)ವನ್ನು ಏರ್ಪಡಿಸಲಾಗಿತ್ತು. ಜೆ.ಸಿ.ಕಾಲೇಜ್‌ ಅಂಕೋಲಾದ ವಿಶ್ರಾಂತ ಪ್ರಾಂಶುಪಾಲರಾದ ಶ್ರೀ ವಿ.ಆರ್‌.ವೆರ್ಣೇಕರ್‌ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿ, ಇಂದಿನ ವಿದ್ಯಾರ್ಥಿಗಳ ಒತ್ತಡದ ಬದುಕು ಹಾಗೂ ಸ್ಮರಣಶಕ್ತಿಯ ಕುರಿತಾಗಿ ಮನೋಜ್ಞವಾಗಿ ವಿವರಿಸಿದರು. ಸ್ಮರಣಶಕ್ತಿ ವಂಶಪಾರಂಪರ‍್ಯವಲ್ಲ, ಅದು ನಮ್ಮ ಸ್ವಂತ ಶಕ್ತಿ. ಪಂಚೇಂದ್ರಿಯಗಳಿಗೆ ಸಂಸ್ಕಾರ ನೀಡಿ ಅದನ್ನು ವರ್ಧಿಸಿಕೊಳ್ಳುವುದು ಹೇಗೆ ಎಂಬುದನ್ನು ಹತ್ತು-ಹಲವು ಉದಾಹರಣೆಗಳೊಂದಿಗೆ ವಿವರಿಸಿ, ಕಲಿಕೆಯಲ್ಲಿ ಕಠಿಣ ಪರಿಶ್ರಮ ಅಗತ್ಯ ಹಾಗೂ ಅನಿವಾರ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಂತರ ಮಾತನಾಡಿದ ಇನ್ನೋರ್ವ ಅತಿಥಿಗಳಾದ ಮಂಗಳೂರು ಇನಸ್ಟಿಟ್ಯೂಟ್‌ ಆಫ್‌ ಟೆಕ್ನೋಲೊಜಿ ಆಂಡ್‌ ಎಂಜಿನಿಯರಿಂಗ್‌ ರಸಾಯನಶಾಸ್ತೃ ವಿಭಾಗದ ನಿಕಟಪೂರ್ವ ಹಿರಿಯ ಸಹಾಯಕ ಉಪನ್ಯಾಸಕರಾದ ಡಾ. ಅಪರ್ಣಾ ಪಿ.ಐ.ಭಟ್ಟ, ಪ್ರಶ್ನೆಗಳನ್ನು ಮಾಡುವುದರ ಮೂಲಕ…

Share happily:
Read More