ಕೊಂಕಣ ಎಜ್ಯುಕೇಶನ ಟ್ರಸ್ಟನ ಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.
ಉದ್ಘಾಟಕರಾಗಿ ಆಗಮಿಸಿದ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶ್ರೀ ಜಿ.ಯು.ಭಟ್ಟ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪುರಸ್ಕಾರ ನೀಡಿ ಮಾತನಾಡಿದ ಅವರು ಪ್ರತಿಭೆಗಳು ಅನಾವರಣಗೊಳ್ಳಬೇಕು ಎಲೆಮರೆಯ ಕಾಯಾಗಬಾರದು. ವಿದ್ಯಾರ್ಥಿಗಳು ಅಭ್ಯಾಸದೋಂದಿಗೆ ಇತರ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕಾಶೀನಾಥ ನಾಯಕರವರು ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಮುರಳೀಧರ ಪ್ರಭುರವರು ಹಾಗೂ ಪ್ರಾಂಶುಪಾಲರಾದ ಸುಲೋಚನಾ ರಾವ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕುಮಾರಿ ವಿಜಯಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಉಪನ್ಯಾಸಕರಾದ ಶಿವಾನಂದ ಭಟ್ ವಂದನಾರ್ಪಣೆಗೈದರು.