ಉತ್ತರ ಕನ್ನಡ ಜಿಲ್ಲೆಗೆ ಉತ್ತಮ ಫಲಿತಾಂಶ ದಾಖಲಿಸಿದ ಸರಸ್ವತಿ ಪಿ.ಯು. ಕಾಲೇಜ್

Share happily:

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ 99% ಫಲಿತಾಂಶ ದಾಖಲಾಗಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಪರೀಕ್ಷೆ ಎದುರಿಸಿದ 76 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಅಂಕ ಗಳಿಸಿದರೆ, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಕುಮಾರ ಮುಕುಂದ ನಾಯಕ 97.66% ಅಂಕ ಗಳಿಸಿ ನೂತನ ದಾಖಲೆ ನಿರ್ಮಿಸುವದರ ಜೊತೆ ನಿರಂಜನ ಭಂಡಾರಕರ್ 97.5%, ಭೂಮಿಕಾ ಭಟ್ಟ 96.66% ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ.

ಅದಲ್ಲದೇ, ರಸಾಯನ ಶಾಸ್ತ್ರದಲ್ಲಿ ಇಬ್ಬರು, ಗಣಕ ವಿಜ್ಞಾನದಲ್ಲಿ ನಾಲ್ಕು, ಗಣಿತದಲ್ಲಿ ಇಬ್ಬರು ಹಾಗೂ ಭೌತಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಇದು ಕಾಲೇಜಿನ ಉತ್ತಮ ಫಲಿತಾಂಶವಾಗಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವೃಂದದವರು, ಮಾನ್ಯ ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಉತ್ತರ ಕನ್ನಡ ಹಾಗೂ ಕೊಂಕಣ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

Share happily: