ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಸೆಲ್ಕೊ ಫೌಂಡೇಶನ್ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಸಂಗಮ ಸೇವಾ ಸಂಸ್ಥೆ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ‘ಶರಧಿ ಜಲಜಾಗೃತಿ ಸಂಘ’ವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೀತಾರಾಮ ಶೆಟ್ಟಿ, ಇಂದಿನ ದಿನಗಳಲ್ಲಿ ಮಾನವನ ಬಳಕೆಗೆ ದೊರೆಯುವ ಶುದ್ಧ ನೀರಿನ ಪ್ರಮಾಣ ಅತ್ಯಂತ ಕಡಿಮೆ ಇದ್ದು ನಾವೆಲ್ಲಾ ಅತ್ಯಂತ ಜಾಗರೂಕತೆಯಿಂದ ಬಳಸುವದು ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಸಂಘಗಳ ಸ್ಥಾಪನೆ ಪೂರಕವಾಗುವದು ಎಂದು ನುಡಿದರು. ಶಿಕ್ಷಕ ಶಿವಾನಂದ ಭಟ್ಟ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ವಹಿಸಿದ್ದರು. ವೇದಿಕೆಯಲ್ಲಿ ಸಿ.ವಿ.ಎಸ್.ಕೆಯ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ, ಶ್ರೀನಿವಾಸ ಭಟ್ಟ ಉಪಸ್ಥಿತರಿದ್ದರು. ರವೀಂದ್ರ ಶೆಟ್ಟಿ ಸ್ವಾಗತಿಸಿದರು, ಶಿವಾನಂದ ಭಟ್ಟ ವಂದಿಸಿದರು, ಶಿಕ್ಷಕ ಪ್ರಕಾಶ ಗಾವಡಿ ನಿರೂಪಿಸಿದರು.