ರಾಜ್ಯ ಮಟ್ಟಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು

Share happily:

ಕುಮಟಾ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ವಿಶಿಷ್ಟ ಶೈಲಿಯಲ್ಲಿ ಛಾಪನ್ನು ಮೂಡಿಸುವಲ್ಲಿ ಸದಾ ಹೆಸರುವಾಸಿಯಾಗಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರವಾರದಲ್ಲಿ ಇತ್ತಿತ್ತೀಚೆಗೆ ಸಂಪನ್ನಗೊಂಡ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ಸಾ.ಶಿ.ಇಲಾಖೆ ಕಾರವಾರ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಜಿಲ್ಲಾ ವಿಜ್ಞಾನ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 26ನೇ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳು ಎಂಬ ಶೀರ್ಷಿಕೆಯಡಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಶಾಲ್ಮಲಿ ಎಸ್. ಮಂಕೀಕರ್ ಹಾಗೂ ಕುಮಾರಿ ಖುಷಿ ಸಿ. ಎಚ್. ಇವರು ಗ್ರಾಮೀಣ ಭಾಗದ ಸೀನಿಯರ್ಸ್ ವಿಭಾಗದಲ್ಲಿ ಸಕ್ಕರೆರೋಗ – ಕಾರಣಗಳು, ನಿರ್ವಹಣೆ ಮತ್ತು ಚಿಕಿತ್ಸೆ ವಿಷಯದ ಕುರಿತು ಅತ್ಯಾಕರ್ಷಕವಾಗಿ ಪ್ರಸ್ತುತಪಡಿಸಿದ ಪಿ.ಪಿ.ಟಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವುದರ ಮೂಲಕ ಶಾಲೆಗೆ ಕೀರ್ತಿ ತಂದಿರುವರಲ್ಲದೆ ರೌಪ್ಯ ಮಹೋತ್ಸವದ ಸಂಭ್ರಮದಲ್ಲಿರುವ ಕೊಂಕಣ ಸಂಸ್ಥೆಗೆ ಇನ್ನಷ್ಟು ಹುರುಪನ್ನು ತುಂಬಿದಂತಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶೈಕ್ಷಣಿಕ ಸಲಹೆಗಾರರು, ಶಿಕ್ಷಕರು, ಪಾಲಕರು ಶ್ಲಾಘಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

Share happily:

No Comment.