ರಜತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರ

Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ರಜತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು ಕುಮಟಾದ ಬ್ಲಡ್ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಸಿಬ್ಬಂದಿಗಳಾದ ಪ್ರಕಾಶ ಗಾವಡಿ, ಹರ್ಷಾ ಶಾಸ್ತ್ರಿ, ಕಾವ್ಯಶ್ರೀ ಪಟಗಾರ, ರಾಮನಾಥ ಶಾನಭಾಗ, ರವಿ ಮುಕ್ರಿ ಈ ಸಂದರ್ಭದಲ್ಲಿ ರಕ್ತದಾನ ಮಾಡುವುದರ ಮೂಲಕ ತಮ್ಮ ಔದಾರ್ಯತೆಯನ್ನು ಮೆರೆದಿದ್ದಾರೆ. ಕುಮಟಾ ಬ್ಲಡ್ ಬ್ಯಾಂಕ್‌ನ ಮುಖ್ಯಸ್ಥರಾದ ಡಾ| ಮಧುಕರ ಕೆ. ನಾಯ್ಕ ಹಾಗೂ ಸಂಗಡಿಗರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

‘ರಕ್ತದಾನ-ಜೀವದಾನ’ ಶೀರ್ಷಿಕೆಯಡಿ ಕೈಗೊಂಡ ಈ ಕಾರ್ಯಕ್ಕೆ ಕೊಂಕಣ ಸಂಸ್ಥೆಯ ಪದಾಧಿಕಾರಿಗಳು, ಶೈಕ್ಷಣಿಕ ಸಲಹೆಗಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Share happily:

Related posts

Leave a Comment