ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು

Share happily:

ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಸಂಪನ್ನಗೊಂಡ ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ದಾಪುಗಾಲಿಟ್ಟಿದ್ದಾರೆ.

ಶಾಲೆಯ ವಿಜ್ಞಾನ ಶಿಕ್ಷಕರುಗಳಾದ ಎಚ್.ಆರ್.ರವಿಶಂಕರ ಹಾಗೂ ಭಾಸ್ಕರ ಹೆಗಡೆ ಇವರ ಸೂಕ್ತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸೂರ್ಯಕಿರಣ ಎನ್. ಮತ್ತು ಪ್ರಮೋದ ಎಲ್. ನಾಯ್ಕ ಇವರು ಸಾರಿಗೆ ಮತ್ತು ಸಂವಹನ ವಿಷಯದಡಿ ಪ್ರದರ್ಶಿಸಿದ ವಿಜ್ಞಾನ ಮಾದರಿಯು ಭಾರತದ ದಕ್ಷಿಣ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ.

ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಶೈಲಿಯಲ್ಲಿ ವಿಶಿಷ್ಟ ಛಾಪನ್ನು ಮೂಡಿಸುವಲ್ಲಿ ಹೆಸರುವಾಸಿಯಾಗಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯು ಈ ಮೂಲಕ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದಂತಾಗಿದೆ.

ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶೈಕ್ಷಣಿಕ ಸಲಹೆಗಾರರು, ಶಿಕ್ಷಕರು, ಪಾಲಕರು ಅಭಿನಂದಿಸಿ ಮುಂದಿನ ಹಂತದ ಸ್ಫರ್ಧೆಗೆ ಶುಭ ಹಾರೈಸಿದ್ದಾರೆ.

Share happily:

Related posts

Leave a Comment