ಸಿವಿಎಸ್‍ಕೆ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

Share happily:

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿವಿಎಸ್‍ಕೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೂರ್ಯ ನಮಸ್ಕಾರದ ಜೊತೆಗೆ ಇಪ್ಪತ್ತೊಂದು ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವುದರ ಮೂಲಕ ವಿದ್ಯಾರ್ಥಿಗಳು ಯೋಗ ದಿನಾಚರಣೆಯನ್ನು ಆಚರಿಸಿದರು. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಯೋಗ ಸ್ಪರ್ಧೆಗಳನ್ನು ನಡೆಸಿ, ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ತರಬೇತುದಾರರಾದ ಶಾಲೆಯ ದೈಹಿಕ ಶಿಕ್ಷಕ ಜಯರಾಜ ಶೇರುಗಾರ ಹಾಗೂ ನಾಗರಾಜ ಭಂಡಾರಿ ವಿದ್ಯಾರ್ಥಿಗಳಿಂದ ಮನಸ್ಸಿಗೆ ಮುದ ನೀಡುವ ಹಿನ್ನಲೆ ಸಂಗೀತದ ಜೊತೆ ಭಿನ್ನ-ಭಿನ್ನ ಆಸನಗಳನ್ನು ಮಾಡಿಸಿದರು. ಶಾಲಾ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಬಿ.ಎಸ್. ಗೌಡ, ಆರ್.ಎಚ್.ದೇಶಭಂಡಾರಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share happily:

Related posts

Leave a Comment