ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಭೂಮಿಕಾ ಸತೀಶ ಭಟ್ಟ ಇವಳು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಮ್ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಇವರು ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಉತ್ತಮ ಭಾಷಣಕಾರಳು, ಸಂಗೀತ ಕಲಾವಿದಳು, ಚಿತ್ರ ಕಲಾವಿದಳೂ ಆದ ಈಕೆಯ ಈ ಅಪರೂಪದ ಪ್ರತಿಭೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಸಂಸ್ಕøತ ಶಿಕ್ಷಕರಾದ ಗೀತಾ ಮೂಳೆ ಹಾಗೂ ಸುರೇಶ ಹೆಗಡೆ ಮಾರ್ಗದರ್ಶನ ಮಾಡಿದ್ದರು.