ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Share happily:

ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಅಧ್ಯಕ್ಷರಾದ ಕಾಶಿನಾಥ ನಾಯಕ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಮೇಲೆ ಸದಾ ಅಭಿಮಾನ ಹೊಂದಿರಬೇಕೆಂದೂ, ತಮ್ಮೆಲ್ಲರ ಭವಿಷ್ಯ ಉಜ್ವಲ ಆಗಲೆಂದೂ ಶುಭ ಹಾರೈಸಿದರು. ಟ್ರಸ್ಟಿನ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ಮಾತನಾಡಿ, ಹದಿಹರಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಆಕರ್ಷಿತರಾದರೆ ಮಾತ್ರ ಉಜ್ವಲ ಭವಿಷ್ಯ ಸಾಧ್ಯ ಎಂದು ಮಾರ್ಮಿಕವಾಗಿ ನುಡಿದರು. ತದನಂತರ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಟ್ರಸ್ಟಿಗಳಾದ ಡಿ.ಡಿ.ಕಾಮತ, ವಿ.ಆರ್.ನಾಯಕ, ನಾಗೇಶ ಶಾನಭಾಗ, ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ, ಮುಖ್ಯಾಧ್ಯಾಪಕಿ ಸುಮಾ ಪ್ರಭು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾ ಪ್ರಭು ಸ್ವಾಗತಿಸಿದರು, ಶಿಕ್ಷಕ ಪ್ರಕಾಶ ಗಾವಡಿ ನಿರೂಪಿಸಿದರು, ಶಿಕ್ಷಕಿ ಅನಿತಾ ಪಟಗಾರ ವಂದಿಸಿದರು, ವಿದ್ಯಾರ್ಥಿನಿ ರಾಜೇಶ್ವರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು.

Share happily:

No Comment.